Breaking News

ಯಕ್ಷಗಾನಕ್ಕೆ ಅವಮಾನ ಮಾಡಿದ್ರಾ ಸಿದ್ದರಾಮಯ್ಯ..? ಕ್ಷಮೆ ಕೇಳಿ ಅಂತಿದೆ ಬಿಜೆಪಿ!

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಟೀಕಿಸುವ ಭರದಲ್ಲಿ ಕರಾವಳಿಯ ಆರಾಧನಾ ಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಈ ಕೂಡಲೇ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

 

ಸದಾ ಹಿಂದೂಗಳನ್ನು ಅವಮಾನಿಸುತ್ತಲೇ ಬಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಹೆಮ್ಮೆಯ ಕೆಲೆಯಾದ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಯಕ್ಷಗಾನ ನಮ್ಮ ರಾಜ್ಯದ ಅಧಿಕೃತ ಕಲೆ. ಕಲೆಯ ಬಗ್ಗೆ ನೀವು ಹೀನಾಯವಾಗಿ ಮಾತನಾಡಿದ್ದೀರಿ. ಇದೀಗ ನೀವು ಸಮಸ್ತ ಯಕ್ಷಗಾನ ಸಂಕುಲಕ್ಕೆ ಕ್ಷಮೆ ಕೇಳುವ ಮೂಲಕ ಗೌರವ ಉಳಿಸಿಕೊಳ್ಳಿ ಎಂದು ರಾಜ್ಯ ಬಿಜೆಪಿ ಹೇಳಿದೆ.

ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್. ಯಕ್ಷಗಾನದಲ್ಲಿ ವೇಷ ಮಾಡುವವನಂತೆ ಇದ್ದಾನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಏಕವಚನದಲ್ಲಿ ಸಿದ್ದರಾಮಯ್ಯ ಟೀಕಿಸಿದ್ದರು. ಇದೀಗ ನಳಿನ್ ಕುಮಾರ್ ಅವರನ್ನು ಟೀಕಿಸುವ ಭರದಲ್ಲಿ ಯಕ್ಷಗಾನವನ್ನು ಉಲ್ಲೇಖಿಸಿದ್ದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ