Breaking News

ದೆಹಲಿ ವಿಮಾನ ನಿಲ್ದಾಣದಲ್ಲಿ ಮಗುವಿಗೆ ಜನ್ಮವಿತ್ತ ಹುಬ್ಬಳ್ಳಿ ಮಹಿಳೆ

Spread the love

ನವದೆಹಲಿ: ಕರ್ನಾಟಕದ ಹುಬ್ಬಳ್ಳಿಗೆ ತೆರಳಬೇಕಾಗಿದ್ದ ಮಹಿಳೆ ರಾಷ್ಟ್ರ ರಾಜಧಾನಿ ನವದೆಹಲಿ ವಿಮಾನ ನಿಲ್ದಾಣದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮಂಗಳವಾರ ವಿಮಾನ ನಿಲ್ದಾಣದ ಟರ್ಮಿನಲ್‌ 3ರಲ್ಲಿ ಈ ಘಟನೆ ನಡೆದಿದೆ. ಈ ಮೂಲಕ ನವದೆಹಲಿ ವಿಮಾನ ನಿಲ್ದಾಣಕ್ಕೆ ಅತ್ಯಂತ ಯುವ ಪ್ರಯಾಣಿಕರೊಬ್ಬರು ಆಗಮಿಸಿದಂತೆ ಆಗಿದೆ.

ವಿಮಾನಕ್ಕಾಗಿ ಮಹಿಳೆ ಪತಿಯ ಜತೆಗೆ ಕಾಯುತ್ತಿದ್ದರು. ತುಂಬು ಗರ್ಭಿಣಿಯಾಗಿದ್ದ ಅವರು ಶೌಚಾಲಯಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿಯೇ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಸಮೀಪದಲ್ಲಿಯೇ ಇದ್ದ ಹೆರಿಗೆ ವಾರ್ಡ್‌ಗೆ ಅವರನ್ನು ಕರೆದೊಯ್ಯಲಾಯಿತು. ಅಲ್ಲಿ ಅವರು ಗಂಡು ಮಗುವಿಗೆ ಜನ್ಮನೀಡಿದರು. ತಾಯಿ ಮತ್ತು ಆರೋಗ್ಯದಿಂದ ಇದ್ದಾರೆ ಎಂದು ಡಾ.ಪ್ರವೀಣ್‌ ಸಿಂಗ್‌ ತಿಳಿಸಿದ್ದಾರೆ.

 

ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ ನಿಯಮಿತ ಕೂಡ ಮಗುವಿನ ಜನನ ಬಗ್ಗೆ ಹರ್ಷ ವ್ಯಕ್ತಪಡಿಸಿದೆ. ನಂತರ ತಾಯಿ ಮತ್ತು ಮಗುವನ್ನು ಸಮೀಪದಲ್ಲಿಯೇ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ