Breaking News

ರಿಂಗ್ ರೋಡ್ ವಿರೋಧಿಸಿ ನ.28ರಂದು ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನೆ

Spread the love

ಸದಾಕಾಲ ಗಡಿ-ಭಾಷೆ ವಿವಾದದ ಹೆಸರಿನಲ್ಲಿ ಹೋರಾಟ ಮಾಡುತ್ತಿದ್ದ ಎಂಇಎಸ್ ಇದೀಗ ಹಲಗಾ-ಮಚ್ಛೆ ರಿಂಗ್ ರೋಡ್ ನಿರ್ಮಾಣ ವಿರೋಧಿಸಿ ಇದೇ ನ.28ರಂದು ಪ್ರತಿಭಟನೆಗೆ ನಿರ್ಧರಿಸಿದೆ.

ಹೌದು ಬೆಳಗಾವಿಯ ರಿಂಗ್ ರೋಡ್ ನಿರ್ಮಾಣಕ್ಕೆ ಬೆಳಗಾವಿ ಸುತ್ತಮುತ್ತಲಿನ ಬಹಳಷ್ಟು ರೈತರು ಫಲವತ್ತಾದ ಜಮೀನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹೀಗಾಗಿ ರಿಂಗ್ ರೋಡ್ ನಿರ್ಮಾಣಕ್ಕೆ ಸಾಕಷ್ಟು ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಹೋರಾಟ ಮಾಡಿದ್ದಾರೆ. ಇದೀಗ ಎಂಇಎಸ್ ಕೂಡ ಇದೇ ನ.28ರಂದು ಧರಣಿ ನಡೆಸಲು ಮುಂದಾಗಿದೆ. ಈ ಸಂಬಂಧ ಪ್ರತಿಭಟನೆಗೆ ಅನುಮತಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರಿಗೆ ಎಂಇಎಸ್ ಮುಖಂಡರು ಮನವಿ ಸಲ್ಲಿಸಿದರು.

ಈ ವೇಳೆ ಮಾಜಿ ಶಾಸಕ ಮನೋಹರ ಕಿಣೇಕರ್, ಪ್ರಕಾಶ ಮರಗಾಳೆ, ನ್ಯಾಯವಾದಿ ಸುಧೀರ್ ಚವ್ಹಾಣ, ಮಾಝಿ ಮೇಯರ್ ಶಿವಾಜಿ ಸುಂಟಕರ್, ವಿಕಾಸ ಕಲಘಟಗಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ