Breaking News

ಶಾಸಕರಿಗೆ ಹಣದ ಆಮಿಷ ಪ್ರಕರಣ ಬಿ.ಎಲ್.ಸಂತೋಷ್‌ಗೆ ಸಮನ್ಸ್ ಜಾರಿ

Spread the love

ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್‌ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ತೆಲಂಗಾಣ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಈ ಸಮನ್ಸ್ ಜಾರಿ ಮಾಡಿದೆ.

ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ. 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್​.ಸಂತೋಷ್​ಗೆ ಸಮನ್ಸ್ ಜಾರಿಗೊಳಿಸಿರುವ ಎಸ್‌ಐಟಿ, ತಪ್ಪಿದರೆ ಬಂಧನದ ಎಚ್ಚರಿಕೆಯನ್ನೂ ಕೊಟ್ಟಿದೆ.

ತೆಲಂಗಾಣದ ಸೈಬರಾಬಾದ್ ಪೊಲೀಸರು ಅ.26ರಂದು ಅಜೀಜ್‌ನಗರದ ಫಾರ್ಮ್ ಹೌಸ್ ಮೇಲೆ‌ ದಾಳಿ ಮಾಡಿದ್ದಾಗ 15 ಕೋಟಿ ರೂ. ಹಣ ಪತ್ತೆಯಾಗಿತ್ತು. ಅದನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಲಾಗಿತ್ತು‌. ಟಿಆರ್‌ಎಸ್‌ನ ನಾಲ್ವರು ಶಾಸಕರ ಖರೀದಿಗೆ ಈ ಹಣ ತರಲಾಗಿತ್ತು ಎಂಬ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದೇ ಪ್ರಕರಣ ಸಂಬಂಧ ಈಗ ಸಮನ್ಸ್ ಜಾರಿ ಮಾಡಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ