Breaking News

ಪಿಎಸ್‌ಐ ಅಕ್ರಮ ನೇಮಕಾತಿ: 12 ಆರೋಪಿಗಳಿಗೆ ಜಾಮೀನು

Spread the love

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಒಟ್ಟು 12 ಜನ ಆರೋಪಿಗಳಿಗೆ ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿದೆ.

 

ಜಾಗೃತ್‌, ಸೋಮನಾಥ, ರಘುವೀರ್, ಮಮತೇಶ್‌ ಗೌಡ, ಸಿ.ಎಂ.ನಾರಾಯಣ , ಆರ್. ಮಧು, ಸಿ.ಕೆ.ದಿಲೀಪ್‌ ಕುಮಾರ್, ರಚನಾ ಹಣಮಂತ, ಪ್ರವೀಣ್‌ ಕುಮಾರ್ ರಾಘವೇಂದ್ರ, ಮಧ್ಯವರ್ತಿಗಳಾದ ಕೇಶವಮೂರ್ತಿ ಮತ್ತು ಶರತ್‌ ಕುಮಾರ್ ಜಾಮೀನು ಪಡೆದವರಾಗಿದ್ದಾರೆ. ಪೊಲೀಸ್ ಇಲಾಖೆಯ ವಿಭಾಗಾಧಿಕಾರಿ ಆರ್. ಮಂಜುನಾಥ್ ಮತ್ತು ಬ್ಯಾಡರ ಹಳ್ಳಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಹರೀಶ್‌ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಅರ್ಜಿದಾರರ ಪರ ಹೈಕೋರ್ಟ್‌ನ ಹಿರಿಯ ವಕೀಲ ಎಂ.ಎಸ್.ಶ್ಯಾಮ ಸುಂದರ್‌ ಮಂಡಿಸಿದ್ದ ವಾದಾಂಶವನ್ನು ವಿಶೇಷ ನ್ಯಾಯಾ ಲಯದ ನ್ಯಾಯಾಧೀಶ ಕೆ.ಲಕ್ಷ್ಮೀನಾರಾಯಣ ಭಟ್ ಪುರಸ್ಕರಿಸಿದ್ದಾರೆ.

ಸಿಐಡಿ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್, ‘ಹಗರಣದಿಂದ 55 ಸಾವಿರ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಇದೊಂದು ಸಾಮಾಜಿಕ-ಆರ್ಥಿಕ ಅಪರಾಧ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಪ್ರಕಾರ, ಈ ಆರೋಪಿಗಳು ಒಎಂಆರ್ ಶೀಟ್ ಸೇರಿದಂತೆ ಪರೀಕ್ಷಾ ದಾಖಲೆಗಳನ್ನು ತಿರುಚಿಸಿದ್ದಾರೆ. ಸಿಬಿಐ ಹೆಚ್ಚುವರಿ ತನಿಖೆ ನಡೆಸುತ್ತಿರುವುದರಿಂದ ಆರೋಪಿಗಳಿಗೆ ಜಾಮೀನು ನೀಡಬಾರದು’ ಎಂದು ಕೋರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ