Breaking News

ಸಿದ್ದು ಕ್ಷೇತ್ರ ನಿರ್ಧಾರ ಇಂದು?; ಕಾಂಗ್ರೆಸ್ ಟಿಕೆಟ್​ಗೆ ಅರ್ಜಿ ಸಲ್ಲಿಸಲು ಕೊನೇ ದಿನ

Spread the love

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆಂಬ ಕುತೂಹಲಕ್ಕೆ ಸೋಮವಾರ ತೆರೆಬೀಳುವ ಸಾಧ್ಯತೆ ಇದೆ. ಮುಂಬರುವ ವಿಧಾನಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಸಕ್ತರಾದವರು ಕೆಪಿಸಿಸಿಗೆ ನಿಗದಿತ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಬೇಕೆಂಬ ನಿಯಮ ಜಾರಿಗೆ ತರಲಾಗಿದೆ.

ಆ ಪ್ರಕಾರ 1,200 ಮಂದಿ ಅರ್ಜಿ ಪಡೆದುಕೊಂಡಿದ್ದು, 1,030 ಮಂದಿ ಭರ್ತಿ ಮಾಡಿದ ಅರ್ಜಿಯನ್ನು ಕೆಪಿಸಿಸಿಗೆ ಸಲ್ಲಿಸಿದ್ದಾರೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಸೋಮವಾರ ಕಡೆಯ ದಿನ. ಈವರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ 55ಕ್ಕೂ ಹೆಚ್ಚು ಹಾಲಿ ಶಾಸಕರು ಅರ್ಜಿ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೇ ಅರ್ಜಿ ಸಲ್ಲಿಸಿ ನಿಯಮ ಪಾಲಿಸಿದ್ದರಿಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿಯಲ್ಲಿ ತಾವು ಕಣಕ್ಕಿಳಿಯಲು ಬಯಸಿರುವ ಕ್ಷೇತ್ರದ ಹೆಸರನ್ನು ನಮೂದಿಸಬೇಕಾಗುತ್ತದೆ. ಒಂದು ವೇಳೆ ಒಂದಕ್ಕಿಂತ ಹೆಚ್ಚಿನ ಕ್ಷೇತ್ರ ಬಯಸಿದ್ದರೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಬಾದಾಮಿಯಿಂದ ಕಣಕ್ಕಿಳಿಯುವುದು ಅನುಮಾನ ಎಂಬ ಸಂದೇಶವನ್ನು ಈಗಾಗಲೇ ಸಿದ್ದರಾಮಯ್ಯ ರವಾನಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಸೋಲುಂಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆಗೆ ಹಿಂದೇಟು ಹಾಕಿದ್ದು, ಕೋಲಾರ ಕ್ಷೇತ್ರಕ್ಕೆ ತೆರಳಿ ಕಣಕ್ಕಿಳಿಯುವ ಆಕಾಂಕ್ಷೆ ಹೊರಹಾಕಿದ್ದರು. ಜತೆಗೆ, ವರುಣಾ ಕ್ಷೇತ್ರ ಸೇಫ್ ಎಂದು ಭಾವಿಸಿದ್ದು, ಅಲ್ಲಿಂದ ಕಣಕ್ಕಿಳಿದರೆ ಹೇಗೆಂಬ ಬಗ್ಗೆಯೂ ಆಪ್ತರಲ್ಲಿ ಚರ್ಚೆ ನಡೆಸಿದ್ದಾರೆ


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ