Breaking News

ಎಸ್.ಟಿ ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯದವರ ಪ್ರತಿಭಟನೆ

Spread the love

ಬೆಂಗಳೂರು: ‘ಎಸ್.ಟಿ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿ ಕುರುಬ ಸಮುದಾಯದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಉದ್ಯಾನಕ್ಕೆ ಆಗಮಿಸಿರುವ ಸಮುದಾಯದ ಜನ, ‘ಎಸ್.ಟಿ ಮೀಸಲಾತಿ ಬೇಕು’ ಎಂದು ಘೋಷಣೆ ಕೂಗುತ್ತಿದ್ದಾರೆ.

ಕುರುಬ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
‘ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರವು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇದುವರೆಗೂ ಅಂಗೀಕರಿಸಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.

‘ಅಧ್ಯಯನ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಆಗ್ರಹಿಸಿದರು.

‘ಎಸ್.ಟಿ ಮೀಸಲಾತಿ ಸಂಬಂಧ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯವ್ಯಾಪಿ ಪಾದಯಾತ್ರೆ ಸಹ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ಮಾತ್ರ ನೀಡುತ್ತಿದ್ದಾರೆ. ಬೇಡಿಕೆ ಈಡೇರಿಸಿಲ್ಲ. ಕೂಡಲೇ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ, ಗಂಭೀರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ