ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿನ ಜೆಸಿಎಸ್ ಆವರಣದಲ್ಲಿನ ಉರ್ದು ಹೆಣ್ಣು ಮಕ್ಕಳ ಶಾಲೆಯ ಕೊಠಡಿ, ಅದರಂತೆ ಮರಾಠಿ ಶಾಲೆಯ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನೆರವೇರಿಸುವರು.
ಈ ಸಂದರ್ಭದಲ್ಲಿ ಉರ್ದು ಶಾಲೆಯ ವಿದ್ಯಾರ್ಥಿಗಳೊಂದಿಗೆ,ದುವಾ ಅದರಂತೆ ಮರಾಠಿ ಶಾಲೆಯ ಮಕ್ಕಳೊಂದಿಗೆ ಪೂಜೆ ಸಲ್ಲಿಸಿ ಮಕ್ಕಳಲ್ಲಿ ಸರಳತೆಯಿಂದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಶಿಕ್ಷಕರಿಂದ ಶಾಸಕಿ ಅಂಜಲಿ ಅವರನ್ನು ಸತ್ಕರಿಸಲಾಯಿತು.