Breaking News

ಸಿಮೆಂಟ್ ಕಂಟೇನರ್ ವಾಹನ ಡಿಕ್ಕಿ , ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ

Spread the love

ಸಿಮೆಂಟ್ ಕಂಟೇನರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ಹೌದು ಮಂಗಳವಾರ ಬೆಳಿಗ್ಗೆ ನಗರದ ಶಿವಾಜಿ ಗಾರ್ಡನ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಸಿಮೆಂಟ್ ಕಂಟೇನರ್ ವಾಹನ ಗುದ್ದಿದೆ.

ವ್ಯಕ್ತಿಯ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ಶಿವಾಜಿ ನಗರದ ರಾಮಸ್ವಾಮಿ ಗೌಡರ ಎಂದು ಗುರುತಿಸಲಾಗಿದೆ. ಘಟನೆಯಿಂದ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಶಾಹಪುರ ಠಾಣೆ ಪೊಲೀಸರು ಮತ್ತು ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸಂಚಾರ ದಟ್ಟನೆಯನ್ನು ನಿಯಂತ್ರಿಸಿ ರಸ್ತೆಯನ್ನು ಸಾರ್ವಜನಿಕರಿಗೆ ಓಡಾಡಲು ಮುಕ್ತ ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ