Breaking News

ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಅವಿರೋಧವಾಗಿ ಆಯ್ಕೆ

Spread the love

ಖಾನಾಪೂರ ತಾಲೂಕಿನ ನಂದಗಡದಲ್ಲಿರುವ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ 17 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅರವಿಂದ್ ಪಾಟೀಲ್ ಅವರು ತಾಲೂಕಾ ಮಾರ್ಕೆಟಿಂಗ್ ಸೂಸೈಟಿಯ ಅಭಿವೃದ್ಧಿಗೆ ಸತತ ಪರಿಶ್ರಮ ಪಟ್ಟಿದ್ದು ಹಾಲಿ ಅಧ್ಯಕ್ಷರಾದ ಶ್ರೀಶೈಲ ಮಾಟೋಳ್ಳಿ ಅವರು ಎರಡು ವರ್ಷಗಳ ಅವಧಿಯ ನಂತರ ರಾಜೀನಾಮೆ ನೀಡಿದ್ರು.

ಖಾಲಿ ಇದ್ದ ಈ ಸ್ಥಾನಕ್ಕೆ ಇನ್ನಿತರ ನಿರ್ದೇಶಕರು ಮಾಜಿ ಶಾಸಕ ಅರವಿಂದ ಪಾಟೀಲರ ಹೆಸರು ಸರ್ವಾನುಮತದಿಂದ ಸೂಚಿಸಿದ ಹಿನ್ನೆಲೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬಳಿಕ ನೂತನ ಅಧ್ಯಕ್ಷ ಅರವಿಂದ ಪಾಟೀಲ್‍ರಿಗೆ ಎಲ್ಲ ನಿರ್ದೇಶಕರು ಶುಭ ಹಾರೈಸಿದರು.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ