Breaking News

ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸಲು ಜ.20 ಕೊನೇ ದಿನ

Spread the love

ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ ಮಂಜೂರು ಮಾಡಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ.

ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ಅತಿ ಹೆಚ್ಚು ಅಂಕ ಪಡೆದಿರುವ ಶಿಕ್ಷಕರ, ಉಪನ್ಯಾಸಕರ/ಪ್ರಾಂಶುಪಾಲರ, ನಿವೃತ್ತ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಿಬಿಎಸ್​ಇ/ ಐಸಿಎಸ್​ಇ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಹರಾಗಿರುವುದಿಲ್ಲ. ಅರ್ಜಿಗಳನ್ನು ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in ಅಥವಾ
www.schooleducation.kar.nic.in ನಲ್ಲಿ ಆನ್​ಲೈನ್​ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2023ರ ಜ.20 ಕೊನೇ ದಿನ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ