Breaking News

ಮನೆ ಬಿಟ್ಟು ಹೋಗಿ ಮದುವೆಯಾದ ಒಂದೇ ವಾರದಲ್ಲಿ ಪ್ರೇಮಿಗಳ ಮೃತದೇಹಗಳು ಪತ್ತೆ!

Spread the love

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕು ಹುಸ್ಕೂರು ಗ್ರಾಮದ ರೈಲು ಹಳಿ ಬಳಿ ಯುವ ಪ್ರೇಮಿಗಳ ಮೃತದೇಹಗಳು ದೊರೆತಿದ್ದು, ಇದು ಆತ್ಮಹತ್ಯೆಯೋ ಕೊಲೆಯೋ ಎಂಬುದು ದೃಢಪಟ್ಟಿಲ್ಲ.

ಮೃತಪಟ್ಟ ಯುವಕನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ.

ಯುವತಿಯ ಗುರುತು ಬಹಿರಂಗವಾಗಿಲ್ಲ. ಇವರ ಮೃತದೇಹಗಳು ದೊರೆತ ಸ್ಥಳ ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವೆ ಇದೆ.

ಸ್ಥಳೀಯರು ಹೇಳುವ ಪ್ರಕಾರ, ಇವರಿಬ್ಬರೂ ಕೆಲವು ತಿಂಗಳುಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಒಂದು ವಾರದ ಹಿಂದೆ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ನಿನ್ನೆ ಮದುವೆಯಾಗಿದ್ದ ಫೋಟೋವನ್ನು ತಮ್ಮ ವಾಟ್ಸಾೃಪ್ ಖಾತೆಗಳಲ್ಲಿ ಸ್ಟೇಟಸ್ ಕೂಡ ಹಾಕಿಕೊಂಡಿದ್ದರು. ನಂತರ ಇದ್ದಕ್ಕಿದ್ದಂತೆಯೇ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ನಂತರ ರೈಲು ಹಳಿ ಬಳಿ ಇವರ ಮೃತದೇಹಗಳು ಪತ್ತೆಯಾಗಿವೆ.

ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ರೈಲು ಹೋದ ರಭಸಕ್ಕೆ ಪ್ರೇಮಿಗಳ ಮೃತದೇಹಗಳು ದೂರ ದೂರ ಬಿದ್ದಿದ್ದವು. ಸದ್ಯ ಪ್ರೇಮಿಗಳು ನಿಜಕ್ಕೂ ಯಾಕೆ ಆತ್ಮಹತ್ಯೆ ಮಾಡಿಕೊಂಡರು ಅಥವಾ ಇವರ ಸಾವಿನಲ್ಲಿ ಬೇರೆ ಯಾರದಾದರೂ ಕೈವಾಡ ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ