Breaking News

ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ 2 ರೂ. ಹೆಚ್ಚಳ

Spread the love

ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 ರೂ. ಹೆಚ್ಚಳದ ಬಗ್ಗೆ ಮಾಹಿತಿ ನೀಡಿ, ಪ್ರತಿ ಲೀಟರ್ ನಂದಿನಿ ಹಾಲು ಮತ್ತು ಮೊಸರಿನ ದರ ಎರಡು ರೂಪಾಯಿ ಹೆಚ್ಚಳವಾಗಲಿದೆ.

ಹೆಚ್ಚುವರಿ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿವಿಧ ಹಾಲುಗಳ ದರ ಏರಿಕೆ ವಿವರ

ನಂದಿನಿ ಟೋನ್ಡ್ ಹಾಲು ಲೀಟರ್ ಗೆ 37 ರಿಂದ 39 ರೂ.

ಹೋಮೋಜಿನೈಸ್ಡ್ ಟೋನ್ಡ್ ಹಾಲು ಲೀಟರ್ ಗೆ 38 ರಿಂದ 40 ರೂ.

ಹೋಮೋಜಿನೈಸ್ಡ್ ಹಸುವಿನ ಹಾಲು 42 ರಿಂದ 44 ರೂ.

ಕೆಎಂಎಫ್ ನಂದಿನಿ ಸ್ಪೆಷಲ್ ಹಾಲು 43 ರಿಂದ 45 ರೂ..

ಹೋಮೋಜಿನೈಸ್ಡ್ ಸ್ಟಾಂಡರ್ಡ್ ಹಾಲು 44 ರಿಂದ 46 ರೂ.

ನಂದಿನಿ ಸಮೃದ್ಧಿ ಹಾಲು ಲೀಟರ್ ಗೆ 48 ರಿಂದ 50 ರೂ.

ಸಂತೃಪ್ತಿ ಹೋಮೋಜಿನೈಸ್ಡ್ ಹಾಲು 50 ರಿಂದ 52 ರೂ.

ನಂದಿನಿ ಮೊಸರು ಪ್ರತಿ ಕೆಜಿಗೆ 45 ರಿಂದ 47 ರೂ.ಗೆ ಏರಿಕೆಯಾಗಿದೆ


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ