ಚುನಾವಣೆಗೆ 5 ತಿಂಗಳು ಬಾಕಿ ಇರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲಿಯೂ ಇಷ್ಟು ದಿನ ಸೈಲೆಂಟ್ ಆಗಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಈಗ ಫಿಲ್ಡಿಗಿಳಿದಿದ್ದು. ಗ್ರಾಮೀಣ ಕ್ಷೇತ್ರದಲ್ಲಿ ನಾಗೇಶ ಮನ್ನೋಳ್ಕರ್ ಪರ ಭರ್ಜರಿ ಬ್ಯಾಟಿಂಗ್ ಬೀಸಿದ್ದಾರೆ.
ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರ ಹೇಳಿಕೇಳಿ ರಮೇಶ ಜಾರಕಿಹೊಳಿ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರ. ಹೇಗಾದ್ರೂ ಮಾಡಿ ಮುಂದಿನ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‍ನ್ನು ಸೋಲಿಸಲೇಬೇಕು ಎಂದು ರಮೇಶ ಪಣ ತೊಟ್ಟಿದ್ದಾರೆ
. ಹೀಗಾಗಿ ಗುರುವಾರ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಅವರ ಬಳಿ ನಾಗೇಶ ಮನ್ನೋಳ್ಕರ್‍ನ್ನು ಕರೆದುಕೊಂಡು ಹೋಗಿದ್ದಾರೆ. ಸಧ್ಯ ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನಾಗೇಶ ಮನ್ನೋಳ್ಕರ್‍ಗೆ ನೀಡುವಂತೆ ಈ ವೇಳೆ ಸಿಎಂ ಬೊಮ್ಮಾಯಿ ಅವರಿಗೆ ರಮೇಶ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ಸಧ್ಯ ಫೋಟೋಗಳು ವೈರಲ್ ಆಗಿದ್ದು. ಈಗಾಗಲೇ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‍ಗಾಗಿ ಮಾಜಿ ಶಾಸಕ ಸಂಜಯ್ ಪಾಟೀಲ್, ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ್ ಜಾಧವ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಈ ಮಧ್ಯ ನಾಗೇಶ ಮನ್ನೋಳ್ಕರ್ ಕೂಡ ಟಿಕೇಟ್ ರೇಸ್‍ನಲ್ಲಿ ಬಂದಿದ್ದು. ಬಿಜೆಪಿ ನಾಯಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಲಿದೆ.