ಮಹಾರಾಷ್ಟ್ರದ ಜತ್ತ ತಾಲೂಕಿನ ಹಳ್ಳಿಗಳು ಕರ್ನಾಟಕಕ್ಕೆ ಸೇರಲು ಠರಾವು ಮಾಡಿದ್ದ ಬಗ್ಗೆ ಸಿಎಂ ಬೊಮ್ಮಾಯಿ ನೀಡಿದ್ದ ಹೇಳಿಕೆಗೆ ಜತ್ತ ತಾಲ್ಲೂಕಿನ ಕನ್ನಡಿಗ ಮಹದೇವ ಅಂಕಲಗಿ ಅಭಿನಂದನೆ ಸಲ್ಲಿಸಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಹೌದು ವಿಡಿಯೋದಲ್ಲಿ ಮಾತನಾಡಿರುವ ಮಹದೇವ ಅಂಕಲಗಿ ಸಿಎಂ ಬೊಮ್ಮಾಯಿ ಅವರಿಗೆ ಜತ್ತ ತಾಲ್ಲೂಕಿನ 44 ಹಳ್ಳಿಗಳ ಪರ ಮಾತನಾಡಿದ್ದಕ್ಕೆ ಅಭಿನಂದನೆ ವ್ಯಕ್ತಪಡಿಸುತ್ತೇನೆ. ಜತ್ತ ತಾಲ್ಲೂಕು ಯಾವಾಗಲೂ ಬರಗಾಲದಲ್ಲಿಯೇ ಇದೇ. ಮಹಾರಾಷ್ಟ್ರ ಸರ್ಕಾರ ನಮ್ಮನ್ನ ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. ಹೀಗಾಗಿ ಜತ್ತ ತಾಲ್ಲೂಕು ಬರಗಾಲದಿಂದ ತತ್ತರಿಸಿದೆ. ಮಹಾಜನ್ ವರದಿ ಪ್ರಕಾರ ಜತ್ತ ತಾಲೂಕಿನ ಹಳ್ಳಿಗಳು ಕರ್ನಾಟಕಕ್ಕೆ ಸೇರಬೇಕು. ನಾವು ಮಹಾರಾಷ್ಟ್ರದಲ್ಲಿ ಇದ್ದರೂ ನಮ್ಮ ಮೇಲೆ ಪ್ರೀತಿ ತೋರಿಸಿದ್ದಿರಿ. ಗಡಿ ಭಾಗದಲ್ಲಿ ಕನ್ನಡಿಗರ ಅಭಿವೃದ್ಧಿಗೆ ಅನುದಾನ ಕೊಟ್ಟಿರುವುದಕ್ಕೂ ನಾವು ಆಬಾರಿ ಆಗಿದ್ದೇವೆ ಎಂದಿದ್ದಾರೆ.
ಒಟ್ಟಿನಲ್ಲಿ ಮಹಾರಾಷ್ಟ್ರದಲ್ಲಿ ಕನ್ನಡ ಮಾತನಾಡುವ ಕನ್ನಡಿಗರು ರೊಚ್ಚಿಗೆದ್ದರೆ ಪರಿಸ್ಥಿತಿ ಏನಾಗಬಹುದು ಎನ್ನುವುದನ್ನು ಮಹಾರಾಷ್ಟ್ರ ಸರ್ಕಾರ ಚಿಂತನೆ ಮಾಡಬೇಕು. ವಿನಾಕಾರಣ ಕನ್ನಡಿಗರ ಕೆಣಕುವ ಕೆಲಸ ಕೈ ಬಿಡಬೇಕು ಎಂಬುದು ಕನ್ನಡಿಗರ ಆಗ್ರಹವಾಗಿದೆ.