Breaking News

ಕೆಪಿಟಿಸಿಎಲ್‌ ಪರೀಕ್ಷೆ ಅಕ್ರಮ ಪ್ರಕರಣ: ತರಬೇತಿ ಕೇಂದ್ರದ ಮಾಲೀಕನ ಸೆರೆ

Spread the love

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕರ ಹುದ್ದೆ ಲಿಖೀತ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗೋಕಾಕನ ಕೋಚಿಂಗ್‌ ಸೆಂಟರ್‌ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ, ಗೋಕಾಕನ ಅಗಸ್ತ್ಯ ಕೋಚಿಂಗ್‌ ಸೆಂಟರ್‌ ಮಾಲೀಕ ಬಾಳೇಶ ಕೆಂಚಪ್ಪ ಕಟ್ಟಿಕಾರ(26) ಎಂಬಾತನನ್ನು ಬಂ ಧಿಸಲಾಗಿದೆ.

ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕರ ಹುದ್ದೆ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್‌ ಡಿವೈಸ್‌, ಮೈಕ್ರೋಚಿಪ್‌ ಕೊಟ್ಟು ಉತ್ತರಗಳನ್ನು ಹೇಳಿ ಬರೆಯಿಸುತ್ತಿದ್ದ ಆರೋಪದ ಮೇಲೆ ಬಾಳೇಶನನ್ನು ಬಂಧಿಸಲಾಗಿದೆ.

ಪರೀಕ್ಷೆ ಬರೆದ 17ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸಂಜೀವ ಭಂಡಾರಿ, ಮಂಜುನಾಥ ಮಾಳಿ ಹಾಗೂ ಶ್ರೀಧರ ಕಟ್ಟಿಕಾರ್‌ ಇತರರೊಂದಿಗೆ ಸೇರಿ ಬಾಳೇಶ ಎಲೆಕ್ಟ್ರಾನಿಕ್‌ ಡಿವೈಸ್‌, ಮೈಕ್ರೋಚಿಪ್‌ ಕೊಟ್ಟು ಅಭ್ಯರ್ಥಿಗಳಿಗೆ ಉತ್ತರಗಳನ್ನು ಹೇಳಿ ಬರೆಯಿಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ. ತನಿಖಾಧಿಕಾರಿ ಡಿಸಿಆರ್‌ಬಿ ಡಿಎಸ್‌ಪಿ ವೀರೇಶ ದೊಡಮನಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ