Breaking News

ಮಾಹಿತಿ ಕಳವಿನಲ್ಲಿ ಕೇಂದ್ರವೂ ಶಾಮೀಲು: ಸುರ್ಜೇವಾಲಾ

Spread the love

ಬೆಂಗಳೂರು: ‘ಮತದಾರರ ಮಾಹಿತಿ ಕಳವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೇರವಾಗಿ ಭಾಗಿಯಾಗಿದೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಶುಕ್ರವಾರ ಆರೋಪಿಸಿದರು.

 

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್‌ ಮತ್ತು ಅವರ ಆಪ್ತರ ಬ್ಯಾಂಕ್‌ ಖಾತೆಗಳಿಗೆ ಕೇಂದ್ರ ಸರ್ಕಾರದ ಸಿಟಿಜನ್‌ ಸರ್ವಿಸ್‌ ಸೆಂಟರ್‌ ಬ್ಯಾಂಕ್‌ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಈ ಹಗರಣ ಬೃಹದಾಕಾರವಾಗಿದ್ದು, ಮತದಾರರ ಮಾಹಿತಿ ಕಳವಿನ ಜತೆಗೆ ತೆರಿಗೆ ಹಣವನ್ನೂ ಲೂಟಿ ಹೊಡೆದಿದ್ದಾರೆ’ ಎಂದರು.

ರವಿಕುಮಾರ್‌ ಅವರ ಗ್ರಾಮದ ಹಲವು ವ್ಯಕ್ತಿಗಳ ಬ್ಯಾಂಕ್‌ ಖಾತೆಗಳಿಗೂ ಕೇಂದ್ರ ಸರ್ಕಾರದ ಸಂಸ್ಥೆಯಿಂದ ಹಣ ವರ್ಗಾವಣೆ ಆಗಿದೆ. ಈ ಕುರಿತು ತನಿಖೆ ನಡೆಯಬೇಕು. ಸತ್ಯಾಂಶ ಬಯಲಿಗೆಳೆಯಲು ಹೈಕೋರ್ಟ್‌
ಮುಖ್ಯ ನ್ಯಾಯಮೂರ್ತಿಯವರ ಮೇಲುಸ್ತುವಾರಿಯಲ್ಲೇ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

‘ಬಸವರಾಜ ಬೊಮ್ಮಾಯಿ ಅವರೇ ಮತದಾರರ ಮಾಹಿತಿ ಕಳವು ಹಗರಣದ ‘ಕಿಂಗ್‌ ಪಿನ್‌’. ಈ ವಿಷಯದಲ್ಲಿ ಸಾರ್ವಜನಿಕರು ಮತ್ತು ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಿಲ್ಲ’ ಎಂದು ದೂರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು, ‘ಮತದಾರರ ಮಾಹಿತಿ ಕಳವು ಹಾಗೂ ದುರ್ಬಳಕೆ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಕೇಂದ್ರ ಸರ್ಕಾರದ ಸಂಸ್ಥೆ ಯೊಂದರಿಂದ ಪ್ರಕರಣದ ಕಿಂಗ್‌ ಪಿನ್‌ಗಳಿಗೆ ಸಾಕಷ್ಟು ಹಣ ಹೋಗಿದೆ. ಅದು ಬೇರೆಯವರ ಹೆಸರಿಗೆ ವರ್ಗಾವಣೆಯಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಈ ಹಣವನ್ನು ಯಾರು? ಯಾವ ಕಾರಣಕ್ಕೆ? ಯಾರಿಗೆ? ವರ್ಗಾವಣೆ ಮಾಡಿದ್ದಾರೆ ಎಂಬುದು ಬಯಲಾಗಬೇಕು’ ಎಂದು ಅವರು ಒತ್ತಾಯಿಸಿದರು.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ