Breaking News

ಮೂಡಲಗಿ: ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ

Spread the love

ಮೂಡಲಗಿ: ವಿದ್ಯಾರ್ಥಿಗಳು ಮೊಬೈಲ್‌ ಬಳಕೆಯಿಂದ ದೂರವಿದ್ದು, ವಿದ್ಯಾರ್ಜನೆಯ ಕಡೆ ಗಮನ ಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಧೀಶ ಜೋತಿ ಪಾಟೀಲ ಹೇಳಿದರು.

ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರಿಗೂ ಸಮಾನ್ಯ ಕಾನೂನು ತಿಳುವಳಿಕೆ ಇರಬೇಕೆಂದು ಕಾನೂನು ಅರಿವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಕಾನೂನು ಅರಿತುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ಸಹಾಯಕವಾಗುತ್ತದೆ ಎಂದರು.

ಬಾಲ್ಯ ವಿವಾಹ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ. ತಮ್ಮ ಅಕ್ಕ-ಪಕ್ಕದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡು ಬಂದರೆ ತಮ್ಮ ಶಿಕ್ಷಕರ ಅಥವಾ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕೆಂದರು.

ಭಾರತ ಸಂವಿಧಾನವನ್ನು ಅಳವಡಿಸಿಕೊಂಡ ಸಂಧರ್ಭದ ಸ್ಮರಣೆಗಾಗಿ ನ.26 ರಂದು ಪ್ರತೀ ವರ್ಷ ಭಾರತದಲ್ಲಿ ಸಂವಿಧಾನ ದಿನ ಎಂದು ಆಚರಿಸಲಾಗುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಯೋಜಕಿ ನಂದಾ ಚುರಮರಿ ವಹಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ