Breaking News

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

Spread the love

ಬೆಂಗಳೂರು : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಚರ್ಚೆ ನಡೆಸಲು ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

 

ಇಂದು ಸಂಜೆ 7 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಗಡಿ, ನದಿ ರಕ್ಷಣಾ ಆಯೋಒಗದ ಅಧ್ಯಕ್ಷ ನ್ಯಾ. ಶಿವರಾಜ ಪಾಟೀಲ್, ಎ.ಜಿ ಪ್ರಭುಲಿಂಗ ನಾವದಗಿ, ಸುಪ್ರೀಂಕೋರ್ಟ್ ನ ಕೆಲ ವಕೀಲರ ಜೊತೆಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕದ ಪರ ವಾದ, ಸರ್ಕಾರದ ನಿಲುವು, ಸರ್ವಪಕ್ಷ ಸಭೆ ಕರೆಯುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

 

ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಲು ಮುಂದಿನ ವಾರ ಸರ್ವಪಕ್ಷಗಳ ಸಭೆ ಕರೆದಿದ್ದೇನೆ. ಕಾನೂನು ತಜ್ಞರು ಹಾಗೂ ಎಲ್ಲಾ ಪಕ್ಷಗಳ ಮುಖಂಡರ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಲಾಗುವುದು. ಮುಂದಿನ ಕಾನೂನು ಹೋರಾಟ, ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಯಾವ ರೀತಿಯಲ್ಲಿ ತಯಾರಾಗಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಾಣಗೆರೆಯಲ್ಲಿ ನಿನ್ನೆ ಹೇಳಿದ್ದಾರೆ.


Spread the love

About Laxminews 24x7

Check Also

Spread the love ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಹಾಗೂ ಮ್ಯಾಪ್ ಮೈ ಕ್ರಾಪ್, ಪುಣೆ ಇವರ ಸಹಯೋಗದಲ್ಲಿ ದಿನಾಂಕ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ