ಗೋಕಾಕ್ ನಗರದಲ್ಲಿ ಆರು ಜನರಿಗೆ ನಾಯಿ ಕಡಿತ ಘಟನೆ ನಡೆದಿದ್ದು. ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ರವಿವಾರ ಗೋಕಾಕ್ ನಗರದ ನಾಯಕ್ ಗಲ್ಲಿಯಲ್ಲಿ ಬೆಳ್ಳಂ ಬೆಳಿಗ್ಗೆ ಆರು ಜನರಿಗೆ ನಾಯಿ ಕಡಿದು ಗಂಭೀರ ಗಾಯಗೊಂಡವರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಗಾಯಗೊಂಡವರ ಆರೋಗ್ಯವನ್ನು ವಿಚಾರಿಸಿ ಧೈರ್ಯ ತುಂಬಿದರು. ನಂತರ ವೈದ್ಯರೊಂದಿಗೆ ಚರ್ಚಿಸಿ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದು, ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ, ಶಿವು ಪಾಟೀಲ, ಇಲ್ಯಾಸ್ ಇನಾಮದಾರ ಹಾಗೂ ಅನೇಕರು ಉಪಸ್ಥಿತರಿದ್ದರು.