Breaking News

ಮಹಾ ಸರ್ಕಾರಕ್ಕೆ ಮತ್ತೊಂದು ಶಾಕ್; ಜತ್ ತಾಲೂಕಿನ ಬೆನ್ನಲ್ಲೇ ಮತ್ತೊಂದು ತಾಲೂಕಿನ ಜನರಿಂದಲೂ ಕರ್ನಾಟಕಕ್ಕೆ ಹೋಗುವುದಾಗಿ ಘೋಷಣೆ

Spread the love

ಸೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದ ಜತ್ ತಾಲೂಕಿನ ಜನರು ತಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಸರ್ಕಾರಕ್ಕೆ ಅಕ್ಕಲಕೋಟ ತಾಲೂಕಿನ ಜನರೂ ಶಾಕ್ ಕೊಟ್ಟಿದ್ದು, ತಮ್ಮನ್ನು ಕರ್ನಾಟಕ್ಕೆ ಸೇರಿಸಿ ಎಂದು ಪಟ್ಟು ಹಿಡಿದಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಜನರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ಮಹಾಜನ್ ಆಯೋಗ ವರದಿಯಂತೆ ನಾವೂ ಕರ್ನಾಟಕ್ಕೆ ಹೋಗುತ್ತೇವೆ. 5 ದಶಕಗಳಿಂದ ಮಹಾರಾಷ್ಟ್ರ ಸರ್ಕಾರದಿಂದ ಗಡಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕುಡಿಯುವ ನೀರು, ರಸ್ತೆ, ಕನ್ನಡ ಶಾಲೆಗಳಿಗೆ ಸೌಲಭ್ಯ ಸಿಕ್ಕಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಗಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಮಹಾಜನ್ ವರದಿಯಂತೆ ನಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ