ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮದ್ಯ ಸೇವಿಸಿ ಸುಮ್ಮನಿರದ ಕೆಲವರು ಕೊಲೆ, ಹಲ್ಲೆಗೆ ನಡೆಸಿರುವ ಘಟನೆಗಳು ವರದಿಯಾಗುತ್ತಲೇ ಇವೆ.
ಇಂತಹದ್ದೇ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಕಾಮಾಕ್ಷಿಪಾಳ್ಯದ ಆದಿತ್ಯ ಬಾರ್ ಮುಂದೆ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. 
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಾಮಾಕ್ಷಿಪಾಳ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕುಡಿದ ಮತ್ತಿನಲ್ಲಿ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ
Laxmi News 24×7