Breaking News

ನಾಳೆ ಗಡಿ ವಿವಾದ ವಿಚಾರಣೆ ಸಮರ್ಥ ವಾದ ನಡೆಸುವ ಭರವಸೆ: ಬೊಮ್ಮಾಯಿ

Spread the love

ವದೆಹಲಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಮಂಗಳವಾರ ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದರು.

ಮಹಾರಾಷ್ಟ್ರ ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ.

ಹಿಂದಿನ ಸಿಜೆಐ ದೀಪಕ್ ಮಿಶ್ರ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ‌ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ