ಇಂದು ಕಣಬರ್ಗಿಯ ಶ್ರೀ ಸಿದ್ದೇಶ್ವರ ದೇವಸ್ಥಾನದ ಪಂಚ ಕಮಿಟಿ ಸದಸ್ಯರೊಂದಿಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿನ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಯಿತು.
ಬರುವ ಸೋಮವಾರದಂದು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಆಗಬೇಕಾದಂತಹ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ವಿದ್ಯುತ್ ದೀಪ, ಶೌಚಾಲಯ ವ್ಯವಸ್ಥೆ, ಫೇವರ್ಸ್ ಅಳವಡಿಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಒದಗಿಸುವ ಕುರಿತು ಚರ್ಚೆ ನಡೆಸಿ ಅಗತ್ಯ ಅನುದಾನವನ್ನ ಬಿಡುಗಡೆ ಮಾಡಿ ಸುಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.