Breaking News

ಕರ್ನಾಟಕ ವಿಧಾನಸಭಾ ಚುನಾವಣೆಗೆ’ ಭರ್ಜರಿ ತಯಾರಿ : 224 ‘ನೋಂದಣಿ ಅಧಿಕಾರಿ’ಗಳ ನೇಮಕ

Spread the love

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ( Karnataka Assembly Election 2023 ) ಹಿನ್ನಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ( Central Election Commission – CEC ) ಭರ್ಜರಿ ತಯಾರಿಯನ್ನು ನಡೆಸಿದೆ. ಮುಂಬರುವಂತ ಚುನಾವಣೆಗೂ ಮುನ್ನವೇ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ( Assistant Electoral Registration Officer – AERO ) ನೇಮಿಸಿ ಆದೇಶಿಸಿದೆ.

 

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕದಲ್ಲಿ 224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯ ಗೆಜೆಟ್ ಪತ್ರದಲ್ಲಿ ಅಧಿಸೂಚನೆಯನ್ನು ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

224 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳನ್ನು ನೇಮಕ ಸಂಬಂಧ ಶೀಘ್ರವೇ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಣೆ ಹೊರಡಿಸಿವುದು. ಅಧಿಸೂಚನೆಯನ್ನು ಒಳಗೊಂಡಿರುವ ರಾಜ್ಯ ಗೆಜೆಟ್ ನ ಆರು ಪ್ರತಿಗಳನ್ನು ತಕ್ಷಣವೇ ಆಯೋಗಕ್ಕೆ ಕಳುಹಿಸುವಂತೆ ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ.

ಹೀಗಿದೆ 224 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳ ಪಟ್ಟಿ

Dailyhunt

Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ