ಬೆಳಗಾವಿಗೆ ಮಹಾ ನಾಯಕರ ಭೇಟಿಯೊಂದಿಗೆ ಕನ್ನಡ ವಿರೋಧಿ ಚಟುವಟಿಕೆಗಳು ಗರಿಗೆದರುತ್ತಿರುವ ಬೆನ್ನಲ್ಲೇ ಖಾಸಗಿ ಕಾಲೇಜಿನ ಸಮಾರಂಭದಲ್ಲಿ ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಯನ್ನು ಥಳಿಸಿದ ಮತ್ತು ಹಲ್ಲೆಗೊಳಗಾದ ವಿದ್ಯಾರ್ಥಿಯ ಮೇಲೇ ಹಿರಿಯ ಪೊಲೀಸ್ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಾರೆ ಎನ್ನುವ ಆರೋಪ ಚರ್ಚೆಗೆ ಗ್ರಾಸವಾಗಿದೆ .
ಬುಧವಾರದಂದು ನಗರದ ಖಾಸಗಿ ಕಾಲೇಜಿನಲ್ಲಿ ನಡೆಯುತ್ತಿದ್ದ ಸಮಾರಂಭದಲ್ಲಿ ಹಾಡಿಗೆ ಕುಣಿಯುತ್ತಿದ್ದ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟ ಹಿಡಿದು ಕುಣಿದ ಕಾರಣಕ್ಕಾಗಿ ಸಹಪಾಠಿಗಳಿಂದ ಹಲ್ಲೆಗೊಳಗಾಗಿದ್ದಾನೆ.
ಈ ಸಂದರ್ಭದಲ್ಲಿ ಯುವಕರ ಮೇಲೆ ಹಲ್ಲೆ ಮಾಡಿದ್ದ ಘಟನೆ ನಂತರ, ಬಾವುಟ ಹಿಡಿದ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಿದ್ದ ಪೋಲಿಸರೇ ಕಪಾಳಕ್ಕೆ ಹೊಡೆದಿದ್ದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ಯುವಕ ಆರೋಪಿಸಿದ್ದಾನೆ
ಖಾಸಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದ ಯುವಕರ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆದಿದೆ. ನಂತರ ಹಲ್ಲೆಗೆ ಒಳಗಾದ ಯುವಕರನ್ನು ಪೊಲೀಸ್ ಠಾಣೆಗೆ ಕರೆಸಿಕೊಂಡ ಪೊಲೀಸ್ ಅಧಿಕಾರಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಗೆ ಒಳಗಾದ ಯುವಕರಿಗೆ ರಕ್ಷಣೆ ನಿಡಬೇಕಿದ್ದ ಪೊಲೀಸರೇ ಯುವಕರ ಮೇಲೆ ಧರ್ಪ ತೋರಿದರಾ ಎಂಬುದು ಸಧ್ಯದ ಪ್ರಶ್ನೆ.
ನಡೆಯನ್ನು ಖಂಡಿಸಿದ್ದಾರೆ.
ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಕಾನೂನು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಮತ್ತು ಎಸಿಪಿ ಎನ್ ವಿ ಬರಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಘಟನೆಗೆ ಸಂಬಂಧಿಸಿದಂತೆ ಯುವಕರ ವಿಚಾರಣೆ ಮಾಡುವುದಾಗಿ ರವೀಂದ್ರ ಗಡಾದಿ ತಿಳಿಸಿದ್ದಾರೆ.
ಹಲ್ಲೆ ಮಾಡಿದವರ ಮೇಲೆ ಕ್ರಮಕ್ಕೆ ಕನ್ನಡಪರ ಸಂಘಟನೆ ಸದಸ್ಯರು ಆಗ್ರಹಿಸಿದ್ದಾರೆ. ಜೊತೆಗೆ ಪೊಲೀಸ್ ಅಧಿಕಾರಿಗಳ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ
ಈ ಮಧ್ಯೆ ನಾಡಧ್ವಜ ಹಿಡಿದು ನೃತ್ಯ ಮಾಡಿದ ವಿದ್ಯಾರ್ಥಿ ಬೆನ್ನಿಗೆ ಕನ್ನಡ ಪರ ಸಂಘಟನೆಗಳು ನಿಂತಿವೆ
ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ
ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ
ಬೆಳಗಾವಿ-ಗೋವಾ ರಾಜ್ಯ ಹೆದ್ದಾರಿ ತಡೆದು ಕರವೇ ಪ್ರತಿಭಟನೆ ನಡೆಸುತ್ತಿದ್ದು
ಕರವೇಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಾಥ್ ನೀಡಿದೆ