Breaking News

ಶಾಲೆಯಲ್ಲೇ ಹೃದಯಾಘಾತವಾಗಿ ಕುಸಿದುಬಿದ್ದು 13 ವರ್ಷದ ಬಾಲಕನ ಸಾವು!

Spread the love

ಹುಬ್ಬಳ್ಳಿ: ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ ಹುಡುಗ ಇನ್ನೂ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ.

 

ಕೇವಲ 13 ವರ್ಷ ವಯಸ್ಸಿನ ಬಾಲಕನೊಬ್ಬ ತಾನು ಕಲಿಯುತ್ತಿದ್ದ ಶಾಲೆಯಲ್ಲೇ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಈ ಘಟನೆ ಸಮೀಪದ ಕಲಘಟಗಿಯಲ್ಲಿ ನಡೆದಿದೆ. ಮಕ್ತುಮ್ ಮಹ್ಮದ್‌ರಫಿ ಮನಿಯಾರ್ (13) ಮೃತಪಟ್ಟ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ. ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.

ಈ ಬಾಲಕ ಆರನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಪಾಠ ನಡೆಯುತ್ತಿದ್ದಾಗ ಎಲ್ಲರ ಎದುರೇ ಏಕಾಏಕಿ ಕುಸಿದುಬಿದ್ದಿದ್ದ. ಆತಯನ್ನು ಕೂಡಲೇ ಕಲಘಟಗಿ ತಾಲ್ಲೂಕು ಆಸ್ಪತ್ರೆಗೆ ಶಿಕ್ಷಕರು ದಾಖಲಿಸಿದ್ದರು. ಆದರೆ ಚೇತರಿಸಿಕೊಳ್ಳದೇ ಆತ ಕೊನೆಯುಸಿರೆಳೆದಿದ್ದಾನೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ