Breaking News

ಮ.ಹಾ.ರಾಷ್ಟ್ರದ ಗಡಿ ಉಸ್ತುವಾರಿ ಸಚಿವರಿಗೆ ಬೆಳಗಾವಿ ಪ್ರವೇಶಿಸದಂತೆ ಸಿಎಂಗೆ ಮನವಿ: ಕರವೇ

Spread the love

ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿ.6 ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಒಂದಲ್ಲ ಒಂದು ನೆಪದಲ್ಲಿ ಭೇಟಿ ನೀಡುವ ಮೂಲಕ ಇಲ್ಲಿನ ಎಂಇಎಸ್ ಹಾಗೂ ಶಿವಸೇನೆಯ ಕಾರ್ಯಕರ್ತರನ್ನು ಬೆಂಬಲಿಸಿ ಕರ್ನಾಟಕ ಸರಕಾರದ ವಿರುದ್ಧ ಪ್ರಚೋದನೆ ನೀಡುವ ಉದ್ದೇಶವಾಗಿದೆ. ಅವರು ಗಡಿಭಾಗದಲ್ಲಿ ಪ್ರವೇಶ ಮಾಡದಂತೆ ನೋಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರವೇ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದರು.

   

ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾ. ಶಿವರಾಜ ಪಾಟೀಲ ಅವರನ್ನು ನೇಮಿಸಿದೆ. ಸರಕಾರ ಆಯೋಗದ ಕಚೇರಿಯನ್ನು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದರೆ ಮಾತ್ರ ಆಯೋಗದ ಪ್ರಯೋಜನೆಯು ಗಡಿ ಭಾಗದ ಜನತೆಗೆ ಲಭಿಸುತ್ತದೆ. ಕಳೆದ ಒಂದೂವರೆ ವರ್ಷದ ಹಿಂದೆ ತಾವು ಅಧಿಕಾರಕ್ಕೆ ಬಂದ ಕೂಡಲೇ ಸುವರ್ಣ ವಿಧಾನಸೌಧವನ್ನು ಸಕ್ರಿಯಗೊಳಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ ಇಲ್ಲಿಯವರೆಗೆ ಕೇವಲ ಮಾಹಿತಿ ಹಕ್ಕು ಆಯೋಗದ ಕಚೇರಿಯನ್ನು ಹೊರತು ಪಡಿಸಿದರೆ ಇನ್ನುಳಿದ ಯಾವುದೇ ಕಚೇರಿಯನ್ನು ಸ್ಥಳಾಂತರ ಮಾಡಿಲ್ಲ. ಅಧಿವೇಶನ ಮುನ್ನಾಧಿನ ಈ ಕುರಿತು ಸರಕಾರ ಸ್ಪಷ್ಟವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರುವ ಕನ್ನಡ ಪ್ರದೇಶವಾದ ಜತ್ ನ್ನು ಕರ್ನಾಟಕಕ್ಕೆ ಸೇರಿಸಲು ಪ್ರಯತ್ನಿಸುವುದಾಗಿ ಹೇಳಿಕೆ ನೀಡಿದ ಬಳಿಕ ಇಲ್ಲಿನ ಕನ್ನಡಿಗರು ಕರ್ನಾಟಕದ ಸರಕಾರದ ಬೆಂಬಲಕ್ಕೆ ನಿಂತಿದ್ದಾರೆ. ಕರ್ನಾಟಕವನ್ನು ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಸಚಿವ ಸಂಪುಟದ ಇಬ್ಬರು ಹಿರಿಯ ಸಚಿವರನ್ನು ಹಾಗೂ ಹಿರಿಯ ಅಧಿಕಾರಿಗಳನ್ನು ಜತ್ ಪ್ರದೇಶಕ್ಕೆ ಕಳುಹಿಸಿ ಅಲ್ಲಿನ ಕನ್ನಡಿಗರಿಗೆ ದೈರ್ಯ ತುಂಬಬೇಕು. ಅಲ್ಲದೆ, ಕಳೆದ 50 ವರ್ಷಗಳಿಂದ ಗಡಿಭಾಗದಲ್ಲಿ ಸತತವಾಗಿ ನಾಡದ್ರೋಹಿ ಚಟುವಟಿಕೆಯಲ್ಲಿ ತೊಡಗಿರುವ ಎಂಇಎಸ್ ಹಾಗೂ ಶಿವಸೇನೆಯನ್ನು ನಿಷೇಧ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ