Breaking News

ಮೋದ್ ಮತಾಲಿಕ್ ಗೆ ಜೀವ ಬೆದರಿಕೆ

Spread the love

ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಅನುಮತಿ ಕೊಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.

ಮೊಬೈಲ್‌ ನಂಬರ್‌ನಿಂದ ವಾಟ್ಸಪ್‌ ವಾಯ್ಸ್ ಮೆಸೇಜ್ ಒಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ.

ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ.

ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನು ಮೇಲಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್‌ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.

ಫೋನ್ ನಂಬರ್ ಮೇಲೆ ತನಿಖೆ ನಡೆಸುವಂತೆ ಮುತಾಲಿಕ್ ಅವರು ಗುರುವಾರ ದೂರು ದಾಖಲು ಮಾಡಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ