ಬೆಂಗಳೂರು: ಒಂಟಿ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ನಗರದ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ.
ನಾಗರಾಜ ಹಾಗೂ ರಮ್ಯಾ ಬಂಧಿತ ದಂಪತಿ. ಬೈಕ್ ಕಳ್ಳನೊಬ್ಬನ ಮೂಲಕ ನಾಗರಾಜ್ ಹಾಗೂ ರಮ್ಯಾಗೆ ಪರಿಚಯ ಆಗಿತ್ತು.
ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ದಿನಕಳೆದಂತೆ ಇಬ್ಬರ ನಡುವೆ ಪ್ರೇಮಾಂಕುವಾಗಿ ಮದುವೆಯಾಗಿದ್ದರು.
ಮದುವೆಯಾದ ಬಳಿಕ ಇಬ್ಬರು ಒಟ್ಟಿಗೆ ಕಳ್ಳತನ ಮಾಡಲು ಆರಂಭಿಸಿದರು. ಒಂಟಿ ಮನೆಗಳನ್ನು ಗುರಿಯಾಗಿರಿಸಿ ದೋಚುತ್ತಿದ್ದರು. ಇದೀಗ ಇಬ್ಬರು ಪೊಲೀಸರ ಅತಿಥಿಯಾಗಿದ್ದು, ಬಂಧಿತರಿಂದ 5.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
Laxmi News 24×7