Breaking News

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಪುಟಾಣಿ ಸಹೋದರರು ಮೃತ್ಯು

Spread the love

ವಿಜಯಪುರ, ಡಿ.4: ಅಣ್ಣ-ತಮ್ಮಂದಿರಾದ ಬಾಲಕರಿಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ರಮೇಶ್(9) ಮತ್ತು ಮಾಳಿಂಗರಾಯ(11) ಮೃತಪಟ್ಟ ಬಾಲಕರಾಗಿದ್ದಾರೆ.

ಇವರಿಬ್ಬರು ಶನಿವಾರ ಶಾಲೆಯಿಂದ ಮನೆಗೆ ಬಂದ ಬಳಿಕ ದನಗಳನ್ನು ಮೇಯಿಸಲೆಂದು ತಮ್ಮ ಪಕ್ಕದ ಜಮೀನಿಗೆ ಹೋಗಿದ್ದರು. ಈ ವೇಳೆ ಅಲ್ಲಿರುವ ಕೃಷಿ ಹೊಂಡಕ್ಕೆ ನೀರು ಕುಡಿಯಲು ಹೋದಾಗ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆನ್ನಲಾಗಿದೆ.

ಈ ಬಗ್ಗೆ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ