Breaking News

ವಿನಯ್ ಕುಲಕರ್ಣಿ ಧಾರವಾಡಕ್ಕೆ ಭೇಟಿ ನೀಡಲು ಕೋರ್ಟ್ ಅನುಮತಿ

Spread the love

ಬೆಂಗಳೂರು, ಡಿಸೆಂಬರ್ 04; ನ್ಯಾಯಾಲಯ ವಿಧಿಸಿದ್ದ ಷರತ್ತಿನಿಂದಾಗಿಬೆಳಗಾವಿಜೈಲಿನಿಂದ ಬಿಡುಗಡೆಯಾಗಿದ್ದರೂ ಧಾರವಾಡಕ್ಕೆ ಭೇಟಿ ನೀಡಲು ಸಾಧ್ಯವಾಗಿರದ ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.

 

ಆದು ಮಾಮೂಲಿಯಾಗಲ್ಲ, ಅನಾರೋಗ್ಯಕ್ಕೆ ತುತ್ತಾಗಿ ತುರ್ತು ನಿಗಾ ಘಟಕ (ಐಸಿಯು)ನಲ್ಲಿರುವ ಸಹೋದರಿ ಭೇಟಿ ಮಾಡಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ.

 

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಅನಾರೋಗ್ಯದಿಂದ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮ್ಮ ಸಹೋದರಿಯ ಕ್ಷೇಮ ವಿಚಾರಿಸಲು ಮೂರು ತಾಸುಗಳ ಕಾಲಾವಕಾಶ ಕೋರಿದ್ದರು. ಆ ಮನವಿಯನ್ನು ಮಾನ್ಯ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ವಿನಯ್ ಕುಲಕರ್ಣಿಗೆ ಅನುಮತಿ ಮಂಜೂರು ಮಾಡಿದೆ.

 

ವಿಚಾರಣಾಧೀನ ನ್ಯಾಯಾಲಯವು ಆದೇಶ ಮಾಡುವವರೆಗೆ ವಿನಯ್ ಕುಲಕರ್ಣಿ ಅವರು ಧಾರವಾಡ ಜಿಲ್ಲೆಗೆ ಪ್ರವೇಶಿಸುವಂತಿಲ್ಲ ಎಂಬ ಷರತ್ತನ್ನು ಸುಪ್ರೀಂಕೋರ್ಟ್ ವಿಧಿಸಿತ್ತು. ಹಾಗಾಗಿ, ವಿನಯ್ ಕುಲಕರ್ಣಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು.

 ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದು, ಅವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಜಯಂತ್ ಕುಮಾರ್ ಮಾನ್ಯ ಮಾಡಿ, ಅನುಮತಿಯನ್ನು ಮಂಜೂರು ಮಾಡಿದ್ದಾರೆ.

 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ