ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಡಿಸೆಂಬರ್ 7ರಿಂದ 11 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 9 ರಂದು ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಡಿಸೆಂಬರ್ 10 ಮತ್ತು 11ರಂದು ಎಲ್ಲಾ ಜಿಲ್ಲೆಗಳಲ್ಲಿಯೂ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ ಎಂದು ಹೇಳಲಾಗಿದೆ.
Laxmi News 24×7