Breaking News

ಬಿಜೆಪಿ ವಿಜಯೋತ್ಸವ ಆಚರಣೆ ವೇಳೆ ಪಟಾಕಿ ಸಿಡಿಸುವ ಸಂಭ್ರಮದಲ್ಲಿ ಅಚಾತುರ್ಯ

Spread the love

ಶಿಸ್ತಿನ ಪಕ್ಷ ಎಂದುಕೊಳ್ಳುತ್ತಿರುವ ಬಿಜೆಪಿಯಲ್ಲಿಯೇ ವಿಜಯೋತ್ಸವ ಆಚರಣೆ ವೇಳೆಯಲ್ಲಿ ಕಾರ್ಯಕರ್ತರ ಅಜಾಗರೂಕತೆಯಿಂದ ಯಡವಟ್ಟು ಸಂಭವಿಸಿದೆ. ಪಟಾಕಿ ಸಿಡಿಸುವ ಸಂಭ್ರಮದಲ್ಲಿ ಅಚಾತುರ್ಯ ನಡೆದಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಸಾರ್ವಜನಿಕರು ರಸ್ತೆಯಲ್ಲಿಯೇ ಛೀಮಾರಿ ಹಾಕುವಂತಾಗಿದೆ.

ಗುಜರಾತ್ ರಾಜ್ಯದ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆ ನಡೆಸುತ್ತಿದ್ದ ವೇಳೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಲು ಮುಂದಾಗಿದ್ದಾರೆ. ಇದೇ ವೇಳೆ ಪಟಾಕಿಯು ಆಟೋವೊಂದಕ್ಕೆ ಬಿದ್ದಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತ ತಪ್ಪಿದಂತಾಗಿದೆ. ಜನನಿಬಿಡ ಪ್ರದೇಶದಲ್ಲಿ ಒಂದಾಗಿರುವ ದೇಶಪಾಂಡೆನಗರದ ಬಿಜೆಪಿ ಕಚೇರಿಯ ಆವರಣದಲ್ಲಿಯೇ ಅಜಾಗರೂಕತೆಯಿಂದ ಇಂತಹದೊಂದು ಘಟನೆ ನಡೆದಿದ್ದು, ಶಿಸ್ತಿನ ಪಕ್ಷದ ಅಶಿಸ್ತಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಏಕಾಏಕಿ ಪಟಾಕಿ ಸಿಡಿಸುವ ಸಂಭ್ರಮದಲ್ಲಿ ಪಟಾಕಿ ಆಟೋ ಒಳಗೆ ಬಿದ್ದಿರುವ ಪರಿಣಾಮ ಆಟೋ ಚಾಲಕನಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರು ಇಲ್ಲದೇ ಇರುವುದರಿಂದ ಸಂಭವಿಸಬಹುದಾದ ಅನಾಹುತ ತಪ್ಪಿದಂತಾಗಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ