Breaking News

ಮೋದಿ ಹವಾ ದೆಹಲಿಯಲ್ಲೇ ಇಲ್ಲ, ನಮ್ಮ ರಾಜ್ಯದಲ್ಲಿ ಇರುತ್ತಾ?: ಸಿದ್ದರಾಮಯ್ಯ

Spread the love

ಮೈಸೂರು: ಗುಜರಾತ್​ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಎಷ್ಟರ ಮಟ್ಟಿಗೆ ಕರ್ನಾಟಕದ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎನ್ನುವ ಚರ್ಚೆ ರಾಜಕೀಯ ಪಕ್ಷಗಳ ಒಳಗೆ ನಡೆಯುತ್ತಿದೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ರೀತಿಯಲ್ಲಿ ಚುನಾವಣೇಯ ವಿಶ್ಲೇಷಣೆ ಮಾಡಿದ್ದಾರೆ.

ಇದೇ ಸಂದರ್ಭ ಮೋದಿ ಅಲೆಯ ಬಗ್ಗೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

‘ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಸಿಗುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಇತ್ತು. ನನಗಿರುವ ಮಾಹಿತಿ ಪ್ರಕಾರ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ನ ಮತಗಳನ್ನು ಒಡೆಯುವ ತಂತ್ರ ಮಾಡಿದೆ. ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷ ಇಲ್ಲ. ಹಾಗಾಗಿ ಜೆಡಿಎಸ್‌ ಜೊತೆ ಬಿಜೆಪಿ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು. ಆದರೆ ಇದರಿಂದ ಯಾವ ಲಾಭವೂ ಆಗಲ್ಲ.

ಕರ್ನಾಟಕದಲ್ಲಿ ಬೇರೆ ರೀತಿಯ ವಿಚಾರಗಳು ಇವೆ. ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಪ್ರಬಲವಾದ ಆಡಳಿತ ವಿರೋಧಿ ಅಲೆ ಇದೆ. ಇಲ್ಲಿನ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಮುಖ್ಯವಾದುದು. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ, 40% ಕಮಿಷನ್‌ ಗುಜರಾತ್‌ ನಲ್ಲಿ ಇದೆ ಎಂದು ಯಾರಾದರೂ ಹೇಳಿದ್ದರಾ? ಇದು ಇರುವುದು ರಾಜ್ಯದಲ್ಲಿ.

ಜೆಡಿಎಸ್‌ ಪಕ್ಷ ರಾಜ್ಯದಲ್ಲಿ ಹೊಸದಾಗಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, 1999 ರಿಂದಲೂ ಚುನಾವಣಾ ಅಖಾಡದಲ್ಲಿದೆ. ಆಮ್‌ ಆದ್ಮಿ ಪಕ್ಷ ಗುಜರಾತ್‌ ನಲ್ಲಿ 10% ಮತ ಪಡೆದರೂ ಕೂಡ ಕಾಂಗ್ರೆಸ್‌ ನ ಗೆಲ್ಲುವ ಸೀಟುಗಳು ಕಡಿಮೆಯಾಗಿಬಿಡುತ್ತದೆ. ಆಮ್‌ ಆದ್ಮಿ ಪಕ್ಷ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಚಾರ ಮಾಡಿದರೂ ಕೇವಲ ಆರು ಸೀಟುಗಳನ್ನು ಗೆಲ್ಲಲಿದೆ. ಹೆಚ್ಚು ಹಣವನ್ನು ಆಮ್‌ ಆದ್ಮಿ ಪಕ್ಷ ಚುನಾವಣೆಗೆ ಖರ್ಚು ಮಾಡಿದೆ. ರಾಹುಲ್‌ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆಯಲ್ಲಿ ಇದ್ದುದ್ದರಿಂದ 2 ದಿನ ಅಷ್ಟೆ ಪ್ರಚಾರ ಮಾಡಲು ಹೋಗಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ನಡೆಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ