Breaking News

ಗುಜರಾತ್ ಫಲಿತಾಂಶ ಕರ್ನಾಟಕಕ್ಕೆ ಅನ್ವಯಿಸಲ್ಲ, ಸಿಎಂ ಹಗಲುಗನಸು:H.D.K.

Spread the love

ದೇವನಹಳ್ಳಿ: ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕಕ್ಕೆ ಅನ್ವಯವಾಗಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​ಡಿಕೆ, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮೊದಲೇ ಗೊತ್ತಿರುವುದೇ… ಗುಜರಾತ್​ ಫಲಿತಾಂಶದ ಬಗ್ಗೆ ವಿಶೇಷ ವಾಖ್ಯಾನ ಮಾಡುವಂತಹದ್ದಿಲ್ಲ.

5 ವರ್ಷದಿಂದ ಗುಜರಾತ್​ನಲ್ಲಿ ವಿರೋಧ ಪಕ್ಷವೇ ಇರಲಿಲ್ಲ. ಆದ್ದರಿಂದ ಗುಜರಾತ್ ಫಲಿತಾಂಶ ಏನು ಬರಲಿದೆ ಎಂದು ಮೊದಲೇ ಎಲ್ಲರಿಗೂ ಗೊತ್ತಿದ್ದ ವಿಷಯ. ರಾಜ್ಯದ ಮುಖ್ಯಮಂತ್ರಿಗಳು ಹೇಳ್ತಿದ್ರಲ್ವಾ.. ‘ಗುಜರಾತ್ ಫಲಿತಾಂಶ ಕರ್ನಾಟಕಕ್ಕೂ ತಟ್ಟುತ್ತೆ. ಬಿಜೆಪಿ ಕಾರ್ಯಕರ್ತರಿಗೆ ಮತ್ತು ಬೆಂಬಲಿಗರಿಗೆ ಬಹಳ ದೊಡ್ಡ ಬೆಂಬಲ ಬರುತ್ತೆ’ ಅಂತ. ಗುಜರಾತ್​ನಲ್ಲಿರುವ ವಾತವಾರಣವೇ ಬೇರೆ, ರಾಜ್ಯದ ವಾತಾವರಣವೇ ಬೇರೆ ಎಂದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಕರ್ಮಕಾಂಡಗಳು ಇವೆಯಲ್ವಾ… ಜನ ಬೇಸತ್ತು ಹೋಗಿದ್ದಾರೆ. ಗುಜರಾತ್​ನ ಫಲಿತಾಂಶದಂತೆ ರಾಜ್ಯದಲ್ಲೂ ಬರುತ್ತೆ ಎಂದು ಕನಸು‌ ಕಾಣುವುದನ್ನ ಸಿಎಂ ಬಿಡಬೇಕು ಎಂದ ಎಚ್​ಡಿಕೆ, ಮೊದಲಿಂದಲೂ ಹಿಮಾಚಲ ಪ್ರದೇಶದಲ್ಲಿ ಒಂದು ಬಾರಿ ಕಾಂಗ್ರೆಸ್, ಒಂದು ಭಾರಿ ಬಿಜೆಪಿಗೆ ಜನತೆ ಅಧಿಕಾರ ನೀಡುತ್ತಾ ಬಂದಿದ್ದಾರೆ. ಈ ಭಾರಿಯೂ ಅದೇ ಮುಂದುವರಿದಿದೆ ಎಂದರು. ಶಾಸಕ ನಿಸರ್ಗ ನಾರಾಯಣಸ್ವಾಮಿ ಇದ್ದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ