Breaking News

ರಾಜ್ಯದಲ್ಲಿ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ: ಆರ್‌.ಅಶೋಕ್‌

Spread the love

ಬೆಂಗಳೂರು: ರಾಜ್ಯದಲ್ಲೂ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಗುಜರಾತ್‌ ಫ‌ಲಿತಾಂಶದ ನಂತರ ದೇಶದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಇರಬೇಕೆಂಬ ವಿಚಾರಕ್ಕೆ ಮತದಾರರು ಮುದ್ರೆ ಒತ್ತಿದ್ದಾರೆ.

ಕರ್ನಾಟಕದಲ್ಲೂ ಅದೇ ಫ‌ಲಿತಾಂಶ ಮರುಕಳಿಸಲಿದೆ ಎಂದು ಹೇಳಿದರು.

ಮುಂದಿನ ಐದು ವರ್ಷಗಳಲ್ಲಿ ಇಡೀ ದೇಶದಲ್ಲಿ ಕಾಂಗ್ರೆಸ್‌ ಹೆಸರು ಹೇಳುವವರು ಇರುವುದಿಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ರಾಹುಲ್‌ಗಾಂಧಿ ಗಡ್ಡ ಬೆಳೆದಿದ್ದು ಬಿಟ್ಟರೆ ಬೇರೇನೂ ಆಗಲಿಲ್ಲ ಎಂದು ಲೇವಡಿ ಮಾಡಿದರು.

ಭಾರತ್‌ ಜೋಡೋ ಕಾಂಗ್ರೆಸ್‌ ಚೋಡೋ ಯಾತ್ರೆಯಾಗಿ ಪರಿವರ್ತನೆಯಾಗಿದೆ. ಸೋನಿಯಾಗಾಂಧಿ ಅವರಿಗೆ ಅವರದೇ ಆದ ಸಮಸ್ಯೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯಸ್ಸಾಗಿದ್ದು ಹೆಸರಿಗೆ ಕೂರಿಸಿದ್ದಾರೆ. ರಾಹುಲ್‌ಗಾಂಧಿಯೂ ಬಲವಂತಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು

Spread the loveಸನ್ಮಾನ್ಯ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ