Breaking News

ಕಲ್ಯಾಣ ಕರ್ನಾಟದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಧೂಳಿಪಟ: ಕಾಂಗ್ರೆಸ್ ವಿಶ್ವಾಸ

Spread the love

ಲಬುರಗಿ: ರಾಜ್ಯದ ಬಿಜೆಪಿ ಸರ್ಕಾರದ ವೈಫಲ್ಯ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ತೋರಿರುವ ನಿರ್ಲಕ್ಷ್ಯದ ವಿರುದ್ದ ಜನ ಬೇಸತ್ತಿರುವುದರಿಂದ ಮುಂಬರುವ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಕ ಭಾಗದ ಎಲ್ಲ41 ಕ್ಷೇತ್ರಗಳಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಕಾಂಗ್ರೆಸ್ ನಾಯಕರು ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಡಾ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಂಘಟಿತ ಪ್ರಯತ್ನ ಹಾಗೂ ರಾಜ್ಯ ಸರ್ಕಾರದ ಮಿತಿ ಮೀರಿದ ಭ್ರಷ್ಟಾಚಾರದಿಂದ ಜನ ಬೇಸತ್ತು ಹೋಗಿದ್ದರಿಂದ ಬಿಜೆಪಿ ಸಂಪೂರ್ಣ ನೆಲಕಚ್ಚಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ಇತರರು ಹೇಳಿದ್ದಾರೆ.

ಇದೇ ಡಿಸೆಂಬರ್ 10 ರಂದು ನಗರದಲ್ಲಿ ಆಯೋಜಿಸಿರುವ ಕಲ್ಯಾಣ ಕರ್ನಾಟಕ ಕ್ರಾಂತಿ ಸಮಾವೇಶ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭದ ಸಿದ್ದತೆ ಕುರಿತು ಪಕ್ಷದ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಎಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ.‌ ದಿನಬಳಕೆ‌ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರ ಸಂಕಟ ಹೇಳದಾಗಿದೆ. ನಿರುದ್ಯೋಗದ ಸಮಸ್ಯೆ ಕಾಡುತ್ತಿದೆ. ನಮ್ಮ ಅಧಿಕಾರಾವಧಿಯಲ್ಲಿ ಆರ್ಟಿಕಲ್ 371 ಜೆ ವಿಧಿ ಅಡಿಯಲ್ಲಿ ಹಲವಾರು ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಂಡಿದ್ದೆವು. ಆದರೆ ಬಿಜೆಪಿ ಸರ್ಕಾರ ನೇಮಕಾತಿ ಮಾಡಿಕೊಳ್ಳದೆ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವೆಸಗಿದೆ. ಈ ಎಲ್ಲ ಅಂಶಗಳ ಕುರಿತು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಲು ಕಲ್ಯಾಣ ಕರ್ನಾಟಕ ಕ್ರಾಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿವರಣೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಡಿಸೆಂಬರ್ 10 ರಂದು ಸನ್ಮಾನ ಮಾಡಲಿದ್ದೇವೆ. ಈ ಸಮಾರಂಭಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಂದ ಕನಿಷ್ಠ 3 ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಅಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಬರಲಿರುವ ಖರ್ಗೆ ಅವರು ಗಂಜ್ ಪ್ರದೇಶದ ನಗರೇಶ್ವರ ಶಾಲೆಯಿಂದ ಜಗತ್ ಸರ್ಕಲ್ ವರೆಗೆ ಮೆರವಣಿಗೆಯಲ್ಲಿ ಬರಲಿದ್ದಾರೆ. ಆ ನಂತರ ಕಾರ್ಯಕ್ರಮ ನಡೆಯುವ ಎನ್ ವಿ ಶಾಲೆಯ ಆವರಣಕ್ಕೆ ಆಗಮಿಸಲಿದ್ದಾರೆ ಎಂದು‌ ವಿವರಿಸಿದರು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ