Breaking News

ಗುಜರಾತ್ ಫಲಿತಾಂಶ 5 ರಾಜ್ಯಗಳ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ: ಜಿಗಜಿಣಗಿ

Spread the love

ವಿಜಯಪುರ : ಗುಜರಾತ್ ವಿಧಾನಸಭಾ ಚುನಾವಣೆ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಲ್ಲಿ ಭವಿಷ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿ ಎಂದು ಮಾಜಿ ಕೇಂದ್ರ ಸಚಿವ, ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.

 

ಗುರುವಾರ ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಂಸದ ಜಿಗಜಿಣಗಿ ಪ್ರತಿಕ್ರಿಯಿಸಿ, ಗುಜರಾತ್ ನಲ್ಲಿ ಸ್ಪಷ್ಟ ಅದ್ವಿತೀಯ ಬಹುಮತ ಮಾತ್ರವಲ್ಲ ಐತಿಹಾಸಿಕ ಗೆಲುವು ಸಾಧಿಸಿದೆ. ಕೆಲವೇ ತಿಂಗಳಲ್ಲಿ ರಾಜ್ಯದಲ್ಲೂ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ಮೋದಿ ಅವರು ದೇಶದ ಜನತೆಗೆ ನೀಡಿರುವ ಕೊಡುಗೆ, ಗುಜರಾತ್ ನಲ್ಲಿ ಕಳೆದ ಎರಡೂವರೆ ದಶಕದಿಂದ ಮಾಡಿರುವ ಬಿಜೆಪಿ ಸರ್ಕಾರದ ಸಾಧನೆ ನಿರೀಕ್ಷೆ ಮೀರಿದ ಫಲಿತಾಂಶ ತಂದುಕೊಡುವಲ್ಲಿ ಯಶಸ್ವಿಯಾಗಿದೆ ಎಂದರು.

ಹಿಮಾಚಲಪ್ರದೇಶದಲ್ಲಿ ಸ್ಥಳೀಯ ಆಡಳಿತ ವಿರೋಧಿ ಅಲೆ ಕಂಡು ಬಂದಿದೆ. ಅಲ್ಲಿ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದೇವು, ನಮ್ಮ ನಿರೀಕ್ಷೆಗೆ ತಕ್ಕಂತೆ ಅಧಿಕಾರಕ್ಕೆ ಏರುವಷ್ಟು ಸ್ಥಾನಗಳು ಸಿಕ್ಕಿಲ್ಲ ಎಂದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ