Breaking News

ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ: ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರಗಳ ಪರಿಶೀಲನೆ

Spread the love

ದಗ: ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ(ಡಿ.9) ನಗರದ ವಿವಿಧೆಡೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳ ಪರಿಶೀಲನೆ ನಡೆಸಿದರು.

ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಚಾಕು ಇರಿತ ಪ್ರಕರಣ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿದ್ದವು.

ಈ ಹಿನ್ನೆಲೆಯಲ್ಲಿ ನಗರದ ಕಮ್ಮಾರಸಾಲು, ರಂಗನವಾಡ, ತೆಗ್ಗಿನ ಪ್ಲಾಟ್ ಸೇರಿ ಹಲವು ಪ್ರದೇಶಗಳ ಮನೆಗಳ ಮೇಲೆ ಪೊಲೀಸರು ಮಾರಕಾಸ್ತ್ರಗಳನ್ನು ಪರಿಶೀಲಿಸಿದರು.

ನಗರದಲ್ಲಿ ಕಳೆದೊಂದು ವಾರದಲ್ಲಿ ಎರಡು ಪ್ರದೇಶಗಳಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಗಾಯಗೊಂಡಿದ್ದರು. ಐದಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಸಿಪಿಐ ಬಿ.ಜಿ. ಸುಬ್ಬಾಪೂರಮಠ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ