ಬೆಂಗಳೂರು, ಡಿಸೆಂಬರ್ 9: ಗಡಿ ವಿವಾದದಲ್ಲಿ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರು ಬಸವರಾಜ ಬೊಮ್ಮಾಯಿ ಅವರು, ಈ ಹಿಂದೆಯೂ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ.
ಈ ಪ್ರಕರಣ ಸುಪ್ರಿಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದಿದ್ದಾರೆ.
ನೆಲ ಜಲ ಗಡಿ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಆಗಲ್ಲ: ಬಿ.ಎಸ್.ಯಡಿಯೂರಪ್ಪ
ನೆಲ, ಜಲ, ಗಡಿ ಹಾಗೂ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅಮಿತ್ ಶಾ ಅವರಿಗೆ ಮಹಾರಾಷ್ಟ್ರ ಸಂಸದರು ದೂರು ನೀಡಿರುವ ವಿಚಾರವಾಗಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಹ್ಮದಾಬಾದ್ ಗೆ ಹೋಗುತ್ತಿದ್ದೇನೆ.

ಗಡಿ ವಿವಾದದ ವಿಚಾರ ಬಗ್ಗೆ ವರಿಷ್ಟರ ಜತೆ ಮಾತಾಡ್ತೇನೆ, ಯಾರು ಯಾರಿಗೇ ದೂರು ಕೊಟ್ರೂ ನಮಗೆ ಸಂಬಂಧ ಇಲ್ಲ. ನಮ್ಮ ರಾಜ್ಯದ ಹಿತವನ್ನು ಕಾಪಾಡುವುದು ಮುಖ್ಯ, ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡ್ತೇವೆ ಎಂದರು.
Laxmi News 24×7