ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟೀಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿರುವ ನಾಗೇಶ ಮನ್ನೋಳಕರ ಅವರು ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ನಾಗಪೂರಕ್ಕೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.
ಮರಾಠಾ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ ಮನ್ನೋಳಕರ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಂಗಳೂರು ದೆಹಲಿವರೆಗೆ ಓಡಾಡಿ ಇದಿಗ ನಾಗಪೂರಕ್ಕೂ ಪ್ರಯಾಣ ಬೆಳೆಸಿ ಬಿಜೆಪಿ ಮುಖಂಡರನ್ನ ಭೇಟಿ ಆಗಿದ್ದಾರೆ. ರಮೇಶ ಜಾರಕಿಹೊಳಿ ಅವರೊಂದಿಗೆ ಪ್ರಯಾಣ ಬೆಳೆಸಿರುವ ನಾಗೇಶ ಮನ್ನೊಳಕರ ಅವರು ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಸಂತೋಷ ಜೀ.ಸೇರಿದಂತೆ ಬಿಜೆಪಿ ರಾಜ್ಯಾದ್ಯಕ್ಷ ನಳಿನಕುಮಾರ ಕಟೀಲ,ಮಾಜಿ ಸಿಎಂ ಜಗದೀಶ ಶೆಟ್ಟರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೂ ಸಹ ಬೇಟಿ ಆಗಿ ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ದಿಸಲು ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದರೆ.
Laxmi News 24×7