Breaking News

10 ತಿಂಗಳ ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಕೊಂದು ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ

Spread the love

ಮುಂಬೈ: ಹತ್ತು ತಿಂಗಳ ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್​ ಬಳಿ ಇರುವ ಮುಂಬೈ-ಅಹಮದಾಬಾದ್​ ಹೆದ್ದಾರಿಯಲ್ಲಿ ನಡೆದಿದೆ.

ಮಹಿಳೆ ಮತ್ತು ಮಗು ಇತರ ಪ್ರಯಾಣಿಕರು ಹಂಚಿಕೊಂಡ ಕ್ಯಾಬ್‌ನಲ್ಲಿ ಪೆಲ್ಹಾರ್‌ನಿಂದ ಪೊಶೆರೆಗೆ ಹಿಂತಿರುಗುತ್ತಿದ್ದರು. ಈ ನಡುವೆ ಟ್ಯಾಕ್ಸಿ ಚಾಲಕ ಹಾಗೂ ಇತರೆ ಪ್ರಯಾಣಿಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ವಿರೋಧಿಸಿದಾಗ ಮಗುವನ್ನು ಕ್ಯಾಬ್‌ನಿಂದ ಹೊರಕ್ಕೆ ಎಸೆದಿದ್ದಾರೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕ್ಯಾಬ್‌ನಿಂದ ಹೊರಕ್ಕೆ ತಳ್ಳಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಆರೋಪಿಗಳ ಸುಳಿವು ಮಾತ್ರ ಈವರೆಗೂ ಪತ್ತೆಯಾಗಿಲ್ಲ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ