Breaking News

ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

Spread the love

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ ಬೆಳಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೈಗೊಳ್ಳಲಾಗಿದ್ದ ಪ್ರವಾಸ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ.

10ನೇ ತರಗತಿಯಲ್ಲಿ ಓದುತ್ತಿದ್ದ ನಾಗಲಕ್ಷ್ಮಿ(16) ಮೃತ ವಿದ್ಯಾರ್ಥಿನಿ. ಶ್ರವಣಬೆಳಗೊಳದಲ್ಲಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿದ್ದರಿಂದ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಬಿ.ಇ.ಒ ಗುರಪ್ಪ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೆ.ಬೆಳಗಲ್ ಗ್ರಾಮಕ್ಕೆ ತೆರಳಿ ಘಟನೆ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದಿದ್ದಾರೆ. ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.


Spread the love

About Laxminews 24x7

Check Also

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ

Spread the loveಬಳ್ಳಾರಿ, ಡಿಸೆಂಬರ್​ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ