Breaking News

ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ

Spread the love

ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ.

ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಈ ಕಳ್ಳತನ ನಡೆದಿದೆ.

ತಹಶೀಲ್ದಾರರ ಮನೆಯಲ್ಲಿದ್ದ 25 ತೊಲ ಬಂಗಾರ, 20 ತೊಲ ಬೆಳ್ಳಿ ಹಾಗೂ 4 ಸಾವಿರ ರೂ. ನಗದನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಗೋಕಾಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದೇ ವಾರದಲ್ಲಿ ಗೋಕಾಕ್​ನಲ್ಲಿ ನಾಲ್ಕು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.


Spread the love

About Laxminews 24x7

Check Also

ಬೀದರ್​ ಜಿಲ್ಲಾ ಪೊಲೀಸ್ ಅಕ್ಕ ಪಡೆ ರಾಜ್ಯಕ್ಕೆ ಮಾದರಿ: ಸಚಿವ ಈಶ್ವರ್ ಖಂಡ್ರೆ

Spread the loveಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ