ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಮೂಡಿಸುವುದಕ್ಕಾಗಿ ಮಹತ್ವದ ಬಸ್ ಯಾತ್ರೆ ಆಯೋಜನೆ ಮಾಡಲಾಗಿದ್ದು, ಜನವರಿ 3 ರಿಂದ ಕೈ ಕಲಿಗಳು ಅಖಾಡಕ್ಕೆ ಇಳಿಯಲಿದ್ದಾರೆ.
ಜನವರಿ 3ರಂದು ಬಸವ ಕಲ್ಯಾಣದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಭಿನ್ನಮತ ಮೂಡಿದೆ ಎಂದು ಹೇಳಲಾಗುತ್ತಿತ್ತು. ಆದರೆ ಉಭಯ ನಾಯಕರೂ ಈ ಮಾತನ್ನು ನಿರಾಕರಿಸಿದ್ದು, ಇಬ್ಬರೂ ಒಟ್ಟಾಗಿ ಬಸ್ ಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ
.ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಡಿ.ಕೆ.ಶಿವಕುಮಾರ್ ಬಸ್ ಯಾತ್ರೆ ನಡೆಸಲಿದ್ದಾರೆ. ಜನವರಿ 3ರಿಂದ ಯಾತ್ರೆ ಪ್ರಾರಂಭವಾಗಲಿದ್ದು, ದಿಲ್ಲಿಯಲ್ಲಿ ಇಂದು ನಡೆಯುವ ಸಭೆಯಲ್ಲಿ ಎರಡು ತಂಡಗಳಲ್ಲಿ ಯಾರ್ಯಾರು ಇರಬೇಕೆಂಬ ಬಗ್ಗೆ ಅಂತಿಮ ಚಿತ್ರಣ ಲಭ್ಯವಾಗಲಿದೆ.