Breaking News

ಸಿದ್ದರಾಮಯ್ಯ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಗರಂ!

Spread the love

ಲಬುರಗಿ : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ನಲ್ಲಿ ಬಣಬಡಿದಾಟ ಹೆಚ್ಚಾಗಿದ್ದು, ಇದೀಗ ಕಲಬುರಗಿ ಕಾಂಗ್ರೆಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಗರಂ ಆಗಿದ್ದಾರೆ.

 

 

ಡಿಸೆಂಬರ್ 10 ರಂದು ಕಲಬುರಗಿಯಲ್ಲಿ ನಡೆದಿದ್ದ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬೇಕಂತಲೇ ಸಿದ್ದರಾಮಯ್ಯ ಅವರು ಅಗೌರವ ತೋರಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.

ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಡಿಸೆಂಬರ್ 10 ರಂದು ನಡೆದ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ವೇದಿಕೆಗೆ ಬಂದ ವೇಳೆ ಕಾಂಗ್ರೆಸ್ ನ ಎಲ್ಲ ನಾಯಕರು ಎದ್ದು ನಿಂತು ಗೌರವ ಸೂಚಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಕುರ್ಚಿ ಮೇಲೆಯೇ ಕುಳಿತುಕೊಂಡು ಖರ್ಗೆ ಅವರಿಗೆ ಅಗೌರವ ಸೂಚಿಸಿದ್ದಾರೆ ಎಂದು ಖರ್ಗೆ ಅಭಿಮಾನಿಗಳು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Spread the love ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ