Breaking News

ಸಕ್ಕರೆ ಲಾಬಿಗೆ ಮಣಿದ ಸರ್ಕಾರ: ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆರೋಪ

Spread the love

ಚನ್ನಮ್ಮನ ಕಿತ್ತೂರು: ‘ಸಕ್ಕರೆ ಲಾಬಿಗೆ ಮಣಿದ ಸರ್ಕಾರ ಕಬ್ಬು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ.

ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎರಡೂವರೆ ತಿಂಗಳು ವಿಳಂಬವಾಗಿ ಕಾರ್ಖಾನೆ ಪ್ರಾರಂಭವಾಗಿವೆ’ ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ದೂರಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಮಾದರಿಯಲ್ಲಿ ಕರ್ನಾಟಕದ ವಿಧಾನಸಭೆ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಮೋದಿ ಅಲೆ ಎಲ್ಲಿಯೂ ಇಲ್ಲ. ಮುಕ್ತವಾಗಿ ಚುನಾವಣೆ ನಡೆಸದೆ ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ ಮುಂದಾಗಿದೆ’ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಡಿ. ಬಿ. ಇನಾಮದಾರ ಮಾತನಾಡಿ, ‘ಚರ್ಮಗಂಟು ರೋಗದಿಂದ ಜಿಲ್ಲೆಯಲ್ಲಿ 30 ಸಾವಿರ ಜಾನುವಾರುಗಳು ಮೃತಪಟ್ಟಿವೆ. ಜಿಲ್ಲೆಯ ಅಧಿಕಾರಿಯೊಬ್ಬರನ್ನು ಕೇಳಿದರೆ 3,800 ಎಂದು ಮಾಹಿತಿ ಕೊಡುತ್ತಾರೆ’ ಎಂದು ಅವರು ಹೇಳಿದರು.

ಶಂಕರ ಹೊಳಿ, ಅಪ್ಪೇಶ ದಳವಾಯಿ, ಸಿದ್ದಣ್ಣ ಕಂಬಾರ, ಕಲ್ಲಪ್ಪ ಕುಗಟಿ, ಮಡಿವಾಳಪ್ಪ ವರಗಣ್ಣವರ, ಜೈರುದ್ದಿನ್ ಜಮಾದಾರ, ಸಂಜೀವ ಲೋಕಾಪುರ ಇದ್ದರು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ