ಚಿತ್ರದುರ್ಗ: ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರೂ ಆಗಿರುವ ಶಿವಮೂರ್ತಿ ಮುರುಘಾ ಶರಣರು ಸೆ.
1ರಿಂದ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಸಂಸ್ಥೆಯ ನಿರ್ವಹಣೆಯಲ್ಲಿ ಮತ್ತು ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಈ ನೇಮಕ ಮಾಡಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರ ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಸಲುವಾಗಿ ಈ ಕ್ರಮ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ