Breaking News

ಮಹದಾಯಿ ವಿಷಯದಲ್ಲಿ ಮಾತನಾಡು ನೈತಿಕತೆ ಕಾಂಗ್ರೆಸ್ ನವರಿಗೆ ಯಿಲ್ಲ:C.M. ಬೊಮ್ಮಾಯಿ

Spread the love

ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದರು. ನಂತರ ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಕೆನಾಲ್ ಗೆ ಗೋಡೆ ಕಟ್ಟಿದ್ದೆ ಕಾಂಗ್ರೆಸ್. ಇದು ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನ ಸಾಧನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಬಿಜೆಪಿ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ. ಹೋರಾಟದ ವೇಳೆ ರಕ್ತದಲ್ಲಿ ಪತ್ರ ಬರೆದಿದ್ದರಿಂದ ಐದು ಕಿ.ಮೀ ಕೆನಾಲ್ ಅನ್ನು ನಾನು ನೀರಾವರಿ ಸಚಿವನಾಗಿದ್ದಾಗ ನಿರ್ಮಿಸಿದ್ದೇನೆ. ಕಾಂಗ್ರೆಸ್ ನವರಿಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಟಕಿದರು.

ದೆಹಲಿ ಪ್ರವಾಸದ ಕುರಿತು ಮಾತನಾಡಿದ ಅವರು, ದೆಹಲಿಯಲ್ಲಿ ಗೃಹ ಸಚಿವರು ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಸಿಎಂಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಾಗುವುದು. ಇನ್ನು ಈ ಗಡಿ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇರುವ ಕಾರಣ ಅದರ ಬಗ್ಗೆ ವ್ಯಾಖ್ಯಾನ ಮಾಡುವುದಿಲ್ಲ ಎಂದರು.


Spread the love

About Laxminews 24x7

Check Also

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the loveಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ